ಕೊಚ್ಚಿ: ಲಕ್ಷದ್ವೀಪ ಪೊಲೀಸರು ತಮ್ಮ ವಿರುದ್ಧ ಸಲ್ಲಿಸಿರುವ ದೇಶದ್ರೋಹ ಪ್ರಕರಣದಲ್ಲಿ ಜಾಮೀನು ಕೋರಿ ಚಲನಚಿತ್ರ ನಟಿ, ನಿರ್ಮಾಪಕಿ ಆಯಿಶಾ ಸುಲ್ತಾನಾ ಸೋಮವಾರ ಕೇರಳ ಹೈಕೋರ್ಟ್‌ ಮೊರೆ ಹೋಗಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಲಕ್ಷದ್ವೀಪದ ಜನರ ವಿರುದ್ಧ ಕೇಂದ್ರ ಸರಕಾರವು ಕೋವಿಡ್ ಸಾಂಕ್ರಾಮಿಕ ರೋಗವನ್ನು ಜೈವಿಕ ಅಸ್ತ್ರವನ್ನಾಗಿ ಬಳಕೆ ಮಾಡುತ್ತಿದೆ ಎಂದು ಟಿವಿ ಚರ್ಚೆಯೊಂದರಲ್ಲಿ ಆಯಿಶಾ ಆರೋಪಿಸಿದ್ದರು.

ಲಕ್ಷದ್ವೀಪದ ಬಿಜೆಪಿ ಘಟಕದ ಅಧ್ಯಕ್ಷ ಅಬ್ದುಲ್ ಖಾದರ್ ಹಾಜಿ ಅವರು ಆಯಿಶಾ ಸುಲ್ತಾನಾ ವಿರುದ್ಧ ದೂರು ದಾಖಲಿಸಿದ್ದರು. ಐಪಿಸಿಯ ಸೆಕ್ಷನ್ 124 ಎ (ದೇಶದ್ರೋಹ) ಹಾಗೂ 153 ಬಿ (ದ್ವೇಷ ಭಾಷಣ) ​​ಅಡಿಯಲ್ಲಿ ಜೂನ್ 10 ರಂದು ಕವರಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಯಿಶಾ ವಿರುದ್ಧ ದಾಖಲಾಗಿರುವ ದೇಶದ್ರೋಹ ಪ್ರಕರಣದ ಕುರಿತು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಸೇರಿದಂತೆ  ಹಲವು ರಾಜಕಾರಣಿಗಳು ಹಾಗೂ ಸಾಮಾಜಿಕ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದರು. 

Source: Vartha Bharathi

You Might Also Like

" data-numposts="10" data-width="">